Karnataka State Police

ಧ್ಯೇಯ್ಯ್ಧೊದ್ದೇಶ

ಕರ್ನಾಟಕದ ಪೊಲೀಸರಾದ ನಾವು ಸಾರ್ವಜನಿಕ ಹಕ್ಕುಗಳನ್ನು ರಕ್ಷಿಸಿ, ಕಾನೂನನ್ನು ಎತ್ತಿಹಿಡಿಯಲು ಪ್ರತಿಜ್ಞಾ ಬದ್ಧರಾಗಿದ್ದೇವೆ ಇದನ್ನು ಸಾಧಿಸಲು ನಾವು ಈ ಕೆಳಗಿನ ಗುರಿಗಳನ್ನು ನಮ್ಮ ಮುಂದಿರಿಸಿಕೊಂಡಿದ್ದೇವೆ ಸಮಾಜ ವಿರೋಧಿ ಶಕ್ತಿಗಳಿಂದ ಜನರ ಪ್ರಾಣಗಳನ್ನು, ಹಕ್ಕುಗಳನ್ನು ರಕ್ಷಿಸಲು ಕಾನೂನಿನ ಪ್ರಕಾರ ಶ್ರಮಿಸುತ್ತೇವೆ. ಅಪರಾಧಿಗಳನ್ನು ಪತ್ತೆ ಹಚ್ಚುವುದರಲ್ಲಿ ಹಾಗೂ ಸಾರ್ವಜನಿಕ ನೆಮ್ಮದಿಯನ್ನು ಕಾಪಾಡುವುದರಲ್ಲಿ ಸಮಾಜದ ಸಹಕಾರವನ್ನು ಗಳಿಸಿಕೊಳ್ಳುತ್ತೇವೆ ಎಲ್ಲರಿಗೂ ವಿಳಂಬವಿಲ್ಲದೆ ನ್ಯಾಯ ದೊರಕುವಂತೆ ಮಾಡಲು ನ್ಯಾಯ ವ್ಯವಸ್ಥೆಯ ಇತರ ಎಲ್ಲಾ ಇಲಾಖೆಗಳೊಡನೆ ಸಹಕರಿಸುತ್ತೇವೆ. ಜಾತಿ, ಮತ ಮುಂತಾದ ಭೇದಗಳನ್ನು ರಾಜಕೀಯ, ಸಾಮಾಜಿಕ ಮುಂತಾದ ವ್ಯತ್ಯಾಸಗಳನ್ನೂ ಎಣಿಸದೆ ಎಲ್ಲಾ ನಾಗರೀಕರನ್ನು ಸಮಾನವಾಗಿ ನೋಡುತ್ತೇವೆ. ಸಮಾಜದ ದುರ್ಬಲ ವರ್ಗಗಳಿಗೆ, ವಯೋವೃದ್ಧರಿಗೆ, ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಸಮುಚಿತವಾದ ಸೌಜನ್ಯವನ್ನೂ, ಉದಾರತೆಯನ್ನೂ ತೋರಿಸುತ್ತೇವೆ. ವೃತ್ತಿಪರ ಜ್ಞಾನವನ್ನೂ, ಕುಶಲತೆಯನ್ನೂ ಹೆಚ್ಚಿಸಿಕೊಳ್ಳಲು ಸತತವಾಗಿ ಶ್ರಮಿಸುತ್ತೇವೆ ಹಾಗೂ ಪೊಲೀಸ್ ಇಲಾಖೆಯ ಕೆಲಸದಲ್ಲಿ ಆಧುನಿಕ ವಿಧಾನಗಳನ್ನು ಅಳವಡಿಸಿಕೊಳ್ಳುತ್ತೇವೆ. ಪ್ರಾಮಾಣಿಕತೆ, ನೇರನಡೆ ಹಾಗೂ ವೃತ್ತಿಮೌಲ್ಯಗಳನ್ನು ಕಾಪಾಡಿಕೊಂಡು ಬರುತ್ತೇವೆ ಮತ್ತು ಮಾನವ ಹಕ್ಕುಗಳನ್ನು ರಕ್ಷಿಸುತ್ತೇವೆ. ಸಾಮಾಜಿಕ ಬದಲಾವಣೆಯಲ್ಲಿ ನಮ್ಮ ಪಾತ್ರವನ್ನು ಒಪ್ಪಿಕೊಂಡು ಅದನ್ನು ಸರಿಯಾಗಿ ನಿರ್ವಹಿಸಿ, ಸಮಾಜದೊಳಗೆ ಜೀವನದ ಗುಣಮಟ್ಟದಲ್ಲಿ ಪ್ರಗತಿಯನ್ನು ಸಾಧಿಸುತ್ತೇವೆ.

ಕರ್ನಾಟಕ ರಾಜ್ಯ ಪೊಲೀಸ್ ವಿಷನ್ – 2020 ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ